ಚನ್ನರಾಯಪಟ್ಟಣ :- ನವೆಂಬರ್ 01 ರಂದು ಚನ್ನರಾಯಪಟ್ಟಣ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಸಿ ಎನ್ ಬಾಲಕೃಷ್ಣ ಅವರು ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಎಲ್ಲರಿಗೂ ತಲುಪಿಸಿ ಎಂದು ಶಾಸಕರು ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥ ಸಂಚಲನ, ವಿಡಿಯೋ ಮತ್ತು ಛಾಯಚಿತ್ರ, ಕನ್ನಡ ಸಾಹಿತ್ಯ ಪುಸ್ತಕ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಲಘು ಉಪಹಾರ, ನೀರಿನ ವ್ಯವಸ್ಥೆ, ಇತ್ಯಾದಿ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳುವಂತೆ ಸೂಚಿಸಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೇ ಸನ್ಮಾನ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ತಾಲೂಕು ದಂಡಾಧಿಕಾರಿ ಬಿ ಎಂ ಗೋವಿಂದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿ ಜಿ ಆರ್ ಹರೀಶ್, ಡಿವೈಎಸ್ಪಿ ರವಿಪ್ರಸಾದ್, ರಕ್ತ ನಿರೀಕ್ಷಕರಾದ ವಸಂತ್, ಬಿಇಓ ದೀಪ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಶಂಕರ್ ಮೂರ್ತಿ, ಪುರಸಭೆಯ ಮುಖ್ಯ ಅಧಿಕಾರಿ ಹೇಮಂತ್ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೋಕೇಶ್ , ನಾಡಪ್ರಭು ಕೆಂಪೇಗೌಡ ವೇದಿಕೆಯ ರಾಜ್ಯಾಧ್ಯಕ್ಷರಾದ ಆನಂದ್ ಕಾಳೆನಹಳ್ಳಿ,ದಲಿತ ಮುಖಂಡರಾದ ದಂಡೋರ ಮಂಜುನಾಥ್, ದಿಂಡಗೂರು ಗೋವಿಂದ,ರೈತ ಸಂಘಟನೆಯ ಮುಖಂಡರಾದ ಅರಳಪುರ ಮಂಜಣ್ಣ, ಮೀಸೆ ಮಂಜಣ್ಣ, ಪುರಿ ಮಂಜುನಾಥ್, ತಾಲೂಕು ಮಟ್ಟದ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *