ಬಿಜೆಪಿಯೊಂದಿಗಿನ ಮೈತ್ರಿಯಿಂದಾಗಿ ಜೆಡಿಎಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಇದೀಗ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ, ಪಕ್ಷದ ಅಡಹಾಕ್ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಹೆಚ್‌ಡಿ ದೇವೇಗೌಡ ಅವರು, ”ಕರ್ನಾಟಕ ಪ್ರದೇಶ ಜನತದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಅಂದರೆ Article XX (10) ಪ್ರಕಾರ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ” ಎಂದು ಆದೇಶ ಹೊರಡಿಸಿದ್ದಾರೆ.

ಮತ್ತೊಂದು ಪ್ರಕಟನೆಯಲ್ಲಿ ”ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷ-ಅಡಹಾಕ್ ಅಧ್ಯಕ್ಷರ ನೇಮಕಾತಿ” ಕುರಿತು ತಿಳಿಸಿದ್ದಾರೆ.”

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈಗಾಗಲೇ ವಿಸರ್ಜನೆ ಮಾಡಲಾಗಿದೆ.

ಮುಂದುವರೆದು, ಪಕ್ಷದ ಕಾರ್ಯಚಟುವಟಿಕೆಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಲು ಕರ್ನಾಟಕ ಜನತಾದಳ (ಜಾತ್ಯತೀತ) ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಅಡಹಾಕ್ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಿಸಲಾಗಿದೆ” ಎಂದು ಹೆಚ್‌.ಡಿ .ದೇವೇಗೌಡ ಆದೇಶ ಹೊರಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *