
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲಿರುವ ಶ್ರೀ ಮಹಾಲಕ್ಷ್ಮಿ ಹಾಗೂ ಮದ್ಧರ ಲಕ್ಷ್ಮಮ್ಮ ದೇವಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಶರನ್ನ ನವರಾತ್ರಿ ಮಹೋತ್ಸವ ಮತ್ತು ವರ್ಧಂತಿ ಮಹೋತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ
ಅಕ್ಟೋಬರ್ 22 ಭಾನುವಾರ ತೀ. ನo. ಶ್ರೀ ಸಭಾಭವನದಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಖ್ಯಾತ ಭರತನಾಟ್ಯ ಕಲಾವಿದೆ ವಿದೂಷಿ ಡಾ. ಸ್ವಾತಿ ಪಿ ಭಾರದ್ವಾಜ್ ರವರ ಸಾಧನೆಯನ್ನು ಗುರುತಿಸಿ ಸರ್ವೇಶ್ವರಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಶ್ರೀ ಲಕ್ಷ್ಮೀಶ್ ತಿಳಿಸಿದ್ದಾರೆ.

