ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇದರ ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಗ್ರಾಮಸ್ಥರ ಜೊತೆಗಿನ ಒಡನಾಟ ಹೆಚ್ಚಿಸಲು ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ಡಯರಗನಾಳು ಗ್ರಾಮದಲ್ಲಿ ‘ದಸರಾ ಕ್ರೀಡಾಕೂಟ’ವನ್ನು ಆಯೋಜಿಸಲಾಯಿತು.

ಎಲ್ಲಾ ವಯಸ್ಕರ ಭಾಗವಹಿಸುವಿಕೆಗಾಗಿ ವಿವಿಧ ಮನರಂಜನೆ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಎಲ್ಲಾ ಕ್ರೀಡೆಗಳಲ್ಲು ಉಲ್ಲಾಸ ಹಾಗೂ ಉತ್ಸುಕತೆಯಿಂದ ಗ್ರಾಮಸ್ಥರು ಪಾಲ್ಗೊಂಡರು. ವಿದ್ಯಾರ್ಥಿಗಳ ಈ ಪ್ರಯತ್ನವು ಗ್ರಾಮಸ್ಥರ ಪ್ರಶಂಸೆಗೆ ಪಾತ್ರವಾಯಿತು.

ಈ ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ದೈಹಿಕ ಶಿಕ್ಷಕರಾದ ಶ್ರೀ ಜಗದೀಶ್ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಸದಾಶಿವನಗೌಡ. ಎಸ್. ಎನ್. ಓ. ರವರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *