ಚನ್ನರಾಯಪಟ್ಟಣ : -ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಸನ, ನೆಹರು ಯುವ ಕೇಂದ್ರ ಹಾಸನ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ, ಚನ್ನರಾಯಪಟ್ಟಣ ಇವರುಗಳ ಸಹಯೋಗದಲ್ಲಿ “ನನ್ನ ಮಣ್ಣು ನನ್ನ ದೇಶ” ಅಮೃತ ಕಳಶ ಯಾತ್ರೆಯ ಮಣ್ಣಿಗೆ ನಮನ ಮತ್ತು ವೀರರಿಗೆ ನಮನ ಕಾರ್ಯಕ್ರಮವನ್ನು ಶಾಸಕ ಸಿ ಎನ್ ಬಾಲಕೃಷ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೋಧರು ದೇಶ ಸೇವೆ ಮಾಡುವುದರಿಂದ ನಾಡಿನ ಜನತೆಯ ಸುಖ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಯೋಧರ ದೇಶ ಸೇವೆ ಅವರ ಜೀವನ ಮಹತ್ವದ ಬಗ್ಗೆ ಸಾಕಷ್ಟು ಮಾಹಿತಿ ನೀಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಚನ್ನರಾಯಪಟ್ಟಣ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿಗಳಿಂದ ಮಣ್ಣನ್ನು ಸಂಗ್ರಹಿಸಿ ಅದನ್ನು ತಾಲ್ಲೂಕು ಮಟ್ಟದಲ್ಲಿ ಸಂಗ್ರಹಣ ಮಾಡಿ ನೆಹರು ಯುವ ಕೇಂದ್ರಕ್ಕೆ ಹಸ್ತಾಂತರ ಮಾಡಲಾಯಿತು.

ಈ ಮಣ್ಣನ್ನು ನವದೆಹಲಿಯ ಹುತಾತ್ಮ ಯೋಧರ ಸ್ಮಾರಕ ಬಳಿ ಉದ್ಯಾನ ನಿರ್ಮಾಣಕ್ಕೆ ಬಳಸಲಾಗುತ್ತದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ ಆರ್ ಹರೀಶ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಸಿ ಎನ್ ಬಾಲಕೃಷ್ಣ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಣಾಧಿಕಾರಿ ಜಿ ಆರ್ ಹರೀಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶಂಕರ್ ಮೂರ್ತಿ,ಮಾಜಿ ಸೈನಿಕರಾದ ಬಸವರಾಜು, ಕರಿಗೌಡ, ನಿಂಗೇಗೌಡ, ಬಸವೇಗೌಡ, ಸಂತೋಷ್, ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *