ಆಲೂರು : ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಣಾಕ್ಷಿ ಮತ್ತು ಜಯಂತ್ ಕುಮಾರ್ ದಂಪತಿಗಳ ಪುತ್ರಿ ಗಾನವಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 103ನೇ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತೀರ್ಣರದವರೆಗೆ ಆರ್ಥಿಕತೆಯ (ಫೈನಾನ್ಸಿಯಲ್ ಮ್ಯಾನೇಜ್ಮೆಂಟ್) ಎಂ ಕಾಂ ವಿಭಾಗದಲ್ಲಿ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು.

ಈ ಗೌರವದ ಪ್ರಯುಕ್ತ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜು ನಾಕಲಕೋಡು ಮತ್ತು ಗ್ರಾಮದ ಹಿರಿಯ ಮುಖಂಡರುಗಳಾದ ಅರಣ್ಯ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಡಿ ರಾಮಚಂದ್ರು, ಜಗದೀಶ್, ಸೋಮಶೇಖರ್, ಕಿಶನ್ ರಾಜ್ ಗಾನವಿಗೆ ಅವರ ನಿವಾಸದಲ್ಲಿ ಅಭಿನಂದಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *