
ಆಲೂರು : ಹೆಮ್ಮಿಗೆ ಗ್ರಾಮದ ಜೀವನ್ ಅವರ ಮನೆಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ನಿರ್ವಾಹಕ ಕೂದಲೆಳೆಯಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ.
ಹೆಮ್ಮಿಗೆ ಗ್ರಾಮದ ಸುತ್ತಮುತ್ತ ಕಳೆದ ಒಂದು ವಾರದಿಂದ 13ಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದ್ದು ರೈತರು ಆತಂಕದಿಂದ ತೋಟದ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರಾದ ಹೆಮ್ಮಿಗೆ ಜೀವನ್ (ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ) ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಹೆಮ್ಮಿಗೆ ಗ್ರಾಮದ ಸುತ್ತಮುತ್ತ ಕಾಫಿ ,ಅಡಿಕೆ ಮತ್ತು ಭತ್ತದ ಗದ್ದೆ ಹಾಗೂ ಇತರೆ ಬೆಳೆಗಳನ್ನು ನಾಶ ಮಾಡುತ್ತಿರುವ ಕಾಡಾನೆಯ ಹಿಂಡು. ಈಗ ಸುತ್ತ ಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
ಕಾಡಾನೆ ನೋಡಿ ಭೀಮ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ).

