ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಅನುಘಟ್ಟ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿನೆಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಕೆ ಜಿ ಕುಮಾರ್ .

ನಂತರ ಮಾತನಾಡಿದ ಅವರು ಮಲೆನಾಡು ಭಾಗದ ಸಹಕಾರ ಸಂಘವಾಗಿರುವುದರಿಂದ ಸಣ್ಣ ಹಿಡುವಳಿದಾರರು ಬಹಳ ಸಂಖ್ಯೆಯಲ್ಲಿದ್ದಾರೆ.

ರೈತರಿಗೆ ಕಡಿಮೆ ಹಣವನ್ನು ಸಾಲದ ರೂಪದಲ್ಲಿ ನೀಡಲಾಗುತ್ತಿದೆ. ಈ ಬಾರಿ ನಮ್ಮ ಆಡಳಿತ ಮಂಡಳಿ ನಿಯೋಗ ಸಂಘದ ಜಿಲ್ಲಾ ಕಚೇರಿಗೆ ತೆರಳಿ ಸಾಲ ಹೆಚ್ಚು ನೀಡುವಂತೆ ಮನವಿ ಮಾಡಿಕೊಂಡಿದೆ.

ಕಚೇರಿಯ ಅಧಿಕಾರಿಗಳು ನಮ್ಮ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಿದ್ದಯ್ಯ, ನಿರ್ದೇಶಕರಾದ ಬಿ.ಪಿ ಬಸವರಾಜು, ಬಿ.ಐ ನಟರಾಜು, ಕೆ.ಜಿ ರಾಯ್, ವೀರಭದ್ರಶೆಟ್ಟಿ, ಲೋಲಾಕ್ಷಿ, ಪುಟ್ಟಮ್ಮ, ವಕೀಲರ ಸಂಘದ ಅಧ್ಯಕ್ಷ ಹೆಚ್.ಆರ್ ಚಂದ್ರು, ತಾಲ್ಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹೆಚ್. ಮಹೇಶ್, ಕಾರ್ಯನಿರ್ವಹಣಾಧಿಕಾರಿ ಸತೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *