
ಸಕಲೇಶಪುರ :- ಗ್ರಾಮೀಣಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ,ಜಿಲ್ಲಾ ಪಂಚಾಯತ್ ಹಾಸನ, ತಾಲ್ಲೂಕು ಪಂಚಾಯತ್ ಸಕಲೇಶಪುರ,ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಂಸ್ಥೆಯ ವತಿಯಿಂದ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಮೂಲಕ ಗ್ರಂಥಾಲಯವನ್ನು ಡಿಜಿಟಲೀಕರಣ ಮಾಡಲಾಗಿದೆ.
ಇದರ ಉದ್ಘಾಟನಾ ಕಾರ್ಯಕ್ರಮವನ್ನು ನಾಳೆ ಕುರಬತ್ತೂರು ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಬೆಳಗ್ಗೆ 11:30ಕ್ಕೆ ಉದ್ಘಾಟನೆಯನ್ನು ಮಾಡಲಾಗುತ್ತಿದೆ.
ಕುರುಭತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು, ಯುವತಿಯರು ಮತ್ತು ಎಲ್ಲಾ ಸಮುದಾಯದವರು,ಮಹಿಳೆಯರು, ರೈತರು ಪ್ರತಿದಿನ ಗ್ರಂಥಾಲಯದಲ್ಲಿರುವ ದಿನಪತ್ರಿಕೆಗಳು, ಕಂಪ್ಯೂಟರ್ ತಂತ್ರಜ್ಞಾನ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು ಮತ್ತು ಕಾದಂಬರಿ, ಮಕ್ಕಳ ಕಥೆಗಳು, ಧಾರ್ಮಿಕ ಗ್ರಂಥಗಳು ಕವನಗಳು, ಸಾಹಿತ್ಯ, ಕಲೆ, ವಿಜ್ಞಾನ ಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಡಿಜಿಟಲ್ ಲೈಬ್ರರಿ ಮೂಲಕ ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಹಾಗಾಗಿ ನಾಳೆ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಇದರ ಉಪಯೋಗವನ್ನು ಪಡೆದುಕೊಳ್ಳಬೇಕಾಗಿ ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಪೌಂಡೇಶನ್ ಹಾಗೂ ಡೆಲ್ ಸಂಸ್ಥೆಯ ವತಿಯಿಂದ ವಿನಂತಿ.
