ಸಕಲೇಶಪುರ : ವಲಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೀಟೆಮರವನ್ನು ವಾಹನಗಳ ಸಮೇತ ವಶಪಡಿಸಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ತಾಲೂಕಿನ ಹೆನ್ನಲಿ ಗ್ರಾಮದ ಗದ್ದೆಬೈಲಿನಲ್ಲಿ ಗುರುವಾರ ರಾತ್ರಿ ವೇಳೆಯಲ್ಲಿ ಟಿಪ್ಪರ್ ಲಾರಿ ಹಾಗೂ ಪಿಕಪ್ ವಾಹನದಲ್ಲಿ ಅಕ್ರಮ ಬೀಟೆ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ಮಿಂಚಿನ ಕಾರ್ಯಾ ಚರಣೆ ನಡೆಸಿ ವಾಹನ ಸಮೇತ ಮಾಲು ವಶಪಡಿಸಿಕೊಂಡಿದ್ದಾರೆ.

ಚಾಲಕರು ವಾಹನ ಬಿಟ್ಟು ಪರಾರಿ ಯಾಗಿದ್ದು, ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಲಯ ಅರಣ್ಯಾಧಿಕಾರಿ ಶಿಲ್ಪ , ಉಪ ವಲಯ ಅರಣ್ಯಾಧಿಕಾರಿಗಳಾದ ಮೋಹನ್, ಗಸ್ತು ಅರಣ್ಯಪಾಲಕರಾದ ಯೋಗೇಶ್, ಉಮೇಶ್,ಹನುಮಂತು,ಅರುಣ, ಸಿಬ್ಬಂದಿಗಳಾದ ಸುನಿಲ್ ಶೆಟ್ಟಿ ಲೋಕೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಾಚರಣೆ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವ್ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *