ಹಾಸನ: ರಾಜೀವ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಮಾನ್ಯ ಅವರ ಸಾವಿನ ವಿಚಾರವಾಗಿ ಸೂಕ್ತ ತನಿಖೆ ಮಾಡಬೇಕಾಗಿ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕಳೆದ ಒಂದು ದಿನವಷ್ಟೆ ನಗರದ ರಾಜೀವ್ ತಾಂತ್ರಿಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನ್ಯ ಅವರ ಸಾವು ತುಂಬಲಾಗದ ನಷ್ಟವಾಗಿದೆ.

ಕಳೆದ ಒಂದು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಸೃಷ್ಟಿಸಿದೆ ಮತ್ತು ಅನುಮಾನಾಸ್ಪದವಾಗಿದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ದ್ವಂದ್ವ ಭಾವನೆ ಮೂಡುವಂತೆ ಮಾಡಿದೆ. ಶೀಘ್ರವೇ ಕೂಲಂಕುಶ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಒಂದು ವೇಳೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಅಥವಾ ವಿದ್ಯಾರ್ಥಿನಿಯ ಮನ ನೋಯಿಸುವ ರೀತಿ ವರ್ತಿಸಿದ್ದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿ ಸಮೂಹಕ್ಕೆ ಈ ಘಟನೆಯ ಸತ್ಯಾಸತ್ಯತೆಯನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.

ಸೂಕ್ತ ಪರಿಹಾರ ಕ್ರಮ ಮತ್ತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ ಸಮೂಹಕ್ಕೆ ಈ ಕುರಿತು ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕು ಇಲ್ಲವಾದಲ್ಲಿ ವಿದ್ಯಾರ್ಥಿ ಸಮೂಹದ ಮನವೊಲಿಸುವುದಕ್ಕೆ ವಿಫಲವಾದರೆ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಮತ್ತು ರಾಜ್ಯ ವ್ಯಾಪಿ ಕರೆ ನೀಡಿ ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಶ್ರೀನಿವಾಸ್, ನಗರ ಕಾರ್ಯದರ್ಶಿ ಲೇಪಾಕ್ಷ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *