ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದೆ. ಪರಿಣಾಮ ಸುರೇಖಾ (45) ಎಂಬ ಮಹಿಳೆ ಸಾವನ್ನಪ್ಪಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿಂದ ಪ್ರವಾಸಿಗರ ಬಸ್ ಹೊರನಾಡಿಗೆ ಹೊರಟಿತ್ತು. ಬಸ್ಸಿನಲ್ಲಿದ್ದ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದಾಗ ಬೆಳಗಿನ ಜಾವ 4:45 ಸಮಯದಲ್ಲಿ ಅಪಘಾತ ನಡೆದಿದೆ.

ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಕ್ಯಾರೇ ಎನ್ನಲಿಲ್ಲ.

ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದೆ. ಹೀಗಿದ್ದೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *